ರಾಜ್ಯದಲ್ಲಿ ರಾತ್ರಿ ಕಫ್ರ್ಯೂ ಮುಂದುವರೆಸುತ್ತಾರಂತೆ.. ಶಾಲೆ ಕಾಲೇಜು ಬಂದ್ ಮಾಡ್ತಾರಂತೆ…!!

Spread the love

ಚಿಕ್ಕಮಗಳೂರು,ಜ.3– ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದಿದ್ದಾರೆ.

ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಸಬೇಕಾಗಿದೆ. . ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು ಎಂದರು.ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಕಾರಣವಾಗುತ್ತದೆ..

ನಮಗೆ ಲಾಕ್‍ಡೌನ್ ಮಾಡುವ ಉದ್ದೇಶ ಇಲ್ಲ.  ಆದರೆ ಜನರ ಜೀವ ಉಳಿಸಲು ಅನಿವಾರ್ಯವಾಗಿ ಲಾಕ್ಮಾ ಡೌನ್ ಮಾಡಬೇಕಾಗಬಹುದು. ಹಾಗಾಗಿ ಜನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.

 

ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು.  ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

 

ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ.. ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.97ರಷ್ಟು ಮೊದಲ ಹಾಗೂ ಶೇ.81ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಅಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು.


Spread the love

Leave a Reply

Your email address will not be published. Required fields are marked *