ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣ; ಚಾಲಕನ ವಿರುದ್ಧ ಆರೋಪಪಟ್ಟಿ

Spread the love

ಬೆಂಗಳೂರು: ಲಾಕ್ ಡೌನ್ ವೇಳೆ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹತ್ತರ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 
ನಾಲ್ಕನೇ ಎಸಿಎಂಎಂ ನ್ಯಾಯಾಲಯಕ್ಕೆ 33 ಪುಟಗಳ ಜಾರ್ಜ್ ಶೀಟ್ ಸಲ್ಲಿಸಿರುವ ಹೈಗ್ರೌಂಡ್ಸ್   ಪೊಲೀಸರು, ಚಾಲಕ ಡಾನ್ ಥಾಮಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತನ ನಿರ್ಲಕ್ಷ್ಯದಿಂದಾಗಿ ಕಾರು ಅಪಘಾತವಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಾಗೆಯೇ ಶರ್ಮಿಳಾ ಅವರನ್ನೇ ಸಾಕ್ಷಿಯಾಗಿ ಪರಿಗಣಿಸಲಾಗಿದೆ. 
ಅಪಘಾತದ ವೇಳೆ ನಟಿ ಮಾಂಡ್ರೆ ಹಿಂಬದಿ ಆಸನದಲ್ಲಿದ್ದರು. ಹೀಗಾಗಿ ಅಪಘಾತಕ್ಕೂ ಅವರಿಗೂ ಸಂಬಂಧ ಇಲ್ಲ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. 

Spread the love

Leave a Reply

Your email address will not be published. Required fields are marked *