ಸಂಸತ್‌ ಭವನದಲ್ಲಿ ಅಗ್ನಿ ಅವಘಡ

Spread the love

ನವದೆಹಲಿ: ಸಂಸತ್​ ಭವನದ ಹೆಚ್ಚುವರಿ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಬೆಳಿಗ್ಗೆ 7.30ರ ಸುಮಾರಿಗೆ ಕರೆ ಬಂದ ಹಿನ್ನೆಲೆ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ.

ಶಾರ್ಟ್​​ಸರ್ಕ್ಯೂಟ್​​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.


Spread the love

Leave a Reply

Your email address will not be published. Required fields are marked *