ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

Spread the love

ಬೆಂಗಳೂರು,ಆ.16- ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ದಿಂದ ಮುಂದಿನ ಮೂರು ದಿನಗಳ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ
ಬುಧವಾರದವರೆಗೆ 4 ದಿನಗಳ‌ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಮೂರು ದಿನವೂ ಮಳೆಯಾಗಲಿದೆ
ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ.
ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮಳೆಯಾಗುವ
ಸಾಧ್ಯತೆ ಇದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ರಾಯಚೂರು ದಾವಣಗೆರೆ ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಅಧಿಕಾರಿಗಳು ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *